Sunday, October 2, 2022

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ-ಬಿ.ವೈ ವಿಜಯೇಂದ್ರ

Must read

ಮಂಡ್ಯ : 2024ಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆ ಬಗ್ಗೆ ಸ್ಪಷ್ಟತೆ ಇದೆ. ದೇಶದ ಜನ ತೀರ್ಮಾನ ಮಾಡಿ ಆಶೀರ್ವಾದ ಮಾಡಿದರೆ, ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಮೂಲಕ ಇತಿಹಾಸ ಪುಟದಲ್ಲಿ ಸ್ವರ್ಣ ಅಕ್ಷರದಲ್ಲಿ ಬರೆಯುವ ದಾಖಲೆಯನ್ನು ಬಿಜೆಪಿ ಮಾಡುತ್ತದೆ ಎಂದಿದ್ದಾರೆ.

ಇನ್ನು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸಂಸ್ಕೃತಿಯನ್ನು ಕಿತ್ತು ಹಾಕಬೇಕು. ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ನುಚ್ಚು ನೂರಾಗಿದೆ. ಒಂದೆರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಉಳಿದುಕೊಂಡಿದೆ. ಮುಂಬರುವ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ನಿರ್ಮೂಲನೆ ಆಗಲಿದೆ ಎಂದು ಕಾಂಗ್ರೆಸ್​ ಬಗ್ಗೆ ವ್ಯಂಗ್ಯವಾಡಿದ್ದಾರೆ.

Latest article