ಬೆಳಗಾವಿ: ಕೇಂದ್ರ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಕಾಯ್ದೆ ಜಾರಿಗೆ ತರಲು ಹೊರಟಿದೆ. ಇದು ರೈತ ವಿರೋಧ ನೀತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ಸಮಸ್ಯೆ ಆಗುತ್ತದೆ. ಈ ಹಿಂದೆ ಗ್ಯಾಸ್ಗೂ ಸಬ್ಸಿಡಿ ಕೊಡುತ್ತೇವೆ ಎಂದಿದ್ದರು. ಆ ಬಳಿಕ ಸಬ್ಸಿಡಿಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮ ರೈತರಿಗೆ ಮರಣಶಾಸನ ಆಗಿದೆ ಎಂದು ಕಿಡಿಕಾರಿದ್ದಾರೆ.
ಇನ್ನು ಹಿಂದೆಂದೂ ಕಾಣದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಈಗಾಗಲೇ ಕೇಂದ್ರ ತಂಡ ಪರಿಶೀಲನೆಗೆ ಬಂದಿದೆ. ನಾಲ್ಕು ಪಟ್ಟು ಹೆಚ್ಚಿನ ಪರಿಹಾರವನ್ನು ರೈತರಿಗೆ ವಿತರಣೆ ಮಾಡಬೇಕು. ಜನಸ್ಪಂದನ ಕಾರ್ಯಕ್ರಮ ಚುನಾವಣಾ ಸಿದ್ಧತೆ ಕಾರ್ಯಕ್ರಮ. ಜನರಿಗೆ ಸ್ಪಂದಿಸುವ ಕಾರ್ಯಕ್ರಮ ಆಗಿದ್ದರೆ ಅಧಿಕಾರಿಗಳ ಜೊತೆಗೆ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕಿತ್ತು. ಬಿಜೆಪಿಯವರು ಜನಸ್ಪಂದನೆ ಕಾರ್ಯಕ್ರಮ ಮಾಡುತ್ತಾರೆ. ಕಾಂಗ್ರೆಸ್ನವರು ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಚುನಾವಣೆ ತಯಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.