Tuesday, August 16, 2022

ಡಿಕೆಶಿ ಪಾದಯಾತ್ರೆಗೆ ನಮ್ಮ ವಿರೋಧವಿಲ್ಲ-ಅಶ್ವಥ್​ ನಾರಾಯಣ್

Must read

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ಪಾದಯಾತ್ರೆ ಮಾಡುತ್ತೇನೆ ಎಂದು ಹೊರಟಿದ್ದಾರೆ. ಅವರ ಪಾದಯಾತ್ರೆಗೆ ನಮ್ಮ ವಿರೋಧವಿಲ್ಲ. ಆದರೂ ಸೂಕ್ತ ಅನುಕೂಲಕರ ವಾತಾವರಣ ಇಲ್ಲ ಎಂದು ಸಚಿವ ಅಶ್ವಥ್​ ನಾರಾಯಣ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಪಾದಯಾತ್ರೆ ಮಾಡುವಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ. ಹೀಗಾಗಿ ಒಂದಿಷ್ಟು ನಿರ್ಬಂಧಗಳನ್ನು ತಂದಿದ್ದೇವೆ. ಯಾವುದೇ ರಾಜಕೀಯ ಪಕ್ಷವಾದರೂ ಜನರ ಒಳ್ಳೆಯದನ್ನು ನೋಡಬೇಕು. ಇನ್ನು ಮೇಕೆದಾಟು ವಿಚಾರದಲ್ಲಿ ನಮ್ಮ ಸರ್ಕಾರ ಸೂಕ್ತ ಕ್ರಮಕೈಗೊಂಡಿದ್ದೆಅಲ್ಲದೇ ಯೋಜನೆ ಅನುಷ್ಠಾನ ಸಹ ಮಾಡುತ್ತೇವೆ ಎಂದಿದ್ದಾರೆ.

ಇನ್ನು ವೀಕೆಂಡ್ ಕರ್ಫ್ಯೂಗೆ ಸಚಿವ ಕೆ.ಎಸ್​ ಈಶ್ವರಪ್ಪ ವಿರೋಧ ವ್ಯಕ್ತಪಡಿಸಿರುವ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಟಫ್​ರೂಲ್ಸ್​​ ಕೈಗೊಳ್ಳಲಾಗಿದೆ. ಒಮಿಕ್ರಾನ್ ಒಮ್ಮೆ ಪ್ರಾರಂಭವಾದರೆ ನಿಲ್ಲೋದಿಲ್ಲ. ಪರಿಸ್ಥಿತಿ ಕೈ ಮೀರಿದ ನಂತರ ಯೋಚನೆ ಮಾಡುವುದಕ್ಕಿಂತ ಮುಂಚೆಯೇ ಕ್ರಮಕೈಗೊಳ್ಳಲಾಗಿದೆ ಎಂದರು.

Latest article