Tuesday, October 26, 2021

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ನಳೀನ್ ಕುಮಾರ್ ಕಟೀಲ್ ಹೇಳಿಕೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್​ ಕಾರ್ಯಕರ್ತರು

Must read

ಶಿವಮೊಗ್ಗ: ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು ನಳೀನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಪ್ರತಿಭಟನಾ ನಿರತ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಲೆ ಸರಿಯಿಲ್ಲ, ಚಿಕಿತ್ಸೆ ಪಡೆಯಬೇಕು ಎಂದು ವ್ಯಂಗ್ಯ ಮಾಡಿದ್ದು,  ನಳೀನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಪರಿಷತ್​ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ನಳೀನ್​ ಕುಮಾರ್ ಕಟೀಲ್  ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಇದನ್ನು ನಾನು ಹೇಳ್ತಿಲ್ಲಾ, ವದಂತಿಗಳೆ ಹೇಳುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

More articles

Latest article