ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ-ಹೆಚ್​ಡಿಕೆ ಕಿಡಿ

ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ
ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ-ಹೆಚ್​ಡಿಕೆ ಕಿಡಿ

ಬೆಂಗಳೂರು: ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಕೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಟ್ವೀಟ್​ ಮೂಲಕ ಅಸಮಧಾನ ಹೊರಹಾಕಿರುವ ಅವರು, ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ..? ಎಂದು ಪ್ರಶ್ನಿಸಿದ್ದಾರೆ.

ಇನ್ನು ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ಇಂದ್ರ ವೈಭೋಗ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು. ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ ಎಂದಿದ್ದಾರೆ.

Related Stories

No stories found.
TV 5 Kannada
tv5kannada.com