Friday, January 28, 2022

ಪಾದಯಾತ್ರೆಗೆ ಚಾಲನೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು

Must read

ಬೆಂಗಳೂರು: ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಮಲ್ಲಿಕಾರ್ಜುನ್​ ಖರ್ಗೆ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದ ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆಗೆ ಮಲ್ಲಿಕಾರ್ಜುನ್​ ಖರ್ಗೆ ಚಾಲನೆ ನೀಡಿದ್ದರು. ಈ ವೇಳೆ ಕೊರೊನಾ ನಿಯಮಗಳು ಉಲ್ಲಂಘನೆಯಾಗಿದ್ದು, ಸಾಮಾಜಿಕ ಅಂತರ ಮಾಯವಾಗಿತ್ತು. ಇದೀಗ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಹಿರಿಯ ನಾಯಕರಿಗೆ ಸೋಂಕು ಧೃಡಪಟ್ಟಿರುವುದರಿಂದ ಆತಂಕ ಹೆಚ್ಚಾಗಿದೆ.

Latest article