Monday, January 30, 2023

ರಾಮನಗರದಲ್ಲಿ ಕೊನೆಯಾಗುತ್ತಾ ಕಾಂಗ್ರೆಸ್​​​ ಪಾದಯಾತ್ರೆ: ಪೊಲೀಸ್​ ಬಿಗಿ ಭದ್ರತೆ

Must read

ರಾಮನಗರ: ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ರಾಮನಗರದವರೆಗೂ ಸಾಗಿ ಬಂದಿದ್ದು, ಇಂದೇ ಕಾಂಗ್ರೆಸ್​​ ಪಾದಯಾತ್ರೆ ಕೊನೆಯಾಗುವ ಸಾಧ್ಯತೆ ಇದೆ.

ಒಂದೆಡೆ ಸರ್ಕಾರ ತಕ್ಷಣವೇ ಪಾದಯಾತ್ರೆ ನಿಲ್ಲಿಸುವಂತೆ ಕಾಂಗ್ರೆಸ್​ ನಾಯಕರಿಗೆ ಸೂಚನೆ ನೀಡಿದೆ. ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಯಾವುದೇ ಕಾರಣಕ್ಕೂ ಪಾದಯಾತ್ರೆ ಸ್ಥಗಿತಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ರಾಮನಗರದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾಂಗ್ರೆಸ್ ಜಿಲ್ಲಾ ಕಚೇರಿ ಅನತಿ ದೂರದಲ್ಲಿ ಹಾಗೂ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್​​ ಮಾಡಲಾಗಿದೆ.

ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬಹುತೇಕ ಇಂದೇ ಪಾದಯಾತ್ರೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

Latest article