ಶಿವಮೊಗ್ಗ: ಕಿಡಿಗೇಡಿಗಳು ಮನೆಮುಂದೆ ನಿಲ್ಲಿಸಿದ್ದ ವಾಹನಗಳನ್ನು ಮನಬಂದಂತೆ ಹೊಡೆದು ಜಖಂಗೊಳಿಸಿರುವ ಘಟನೆ ಶಿವಮೊಗ್ಗ ನಗರ ಪ್ರದೇಶದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಎಂಕೆಕೆ ರಸ್ತೆ ಹಾಗೂ ಸಿದ್ಧಯ್ಯ ರಸ್ತೆ ಗಾಂಧಿಬಜಾರ್, ಕೆಆರ್ ಪುರಂನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ. ದುಷ್ಕರ್ಮಿಗಳ ಕೃತ್ಯದಿಂದ 12ಕ್ಕೂ ಹೆಚ್ಚು ಕಾರು, 8ಕ್ಕೂ ಬೈಕ್ ಸಂಪೂರ್ಣ ಹಾನಿಯಾಗಿದೆ.
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಕಿಡಿಗೇಡಿಗಳ ಈ ವಿಕೃತ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು.