ಲಂಡನ್ನ ಬರ್ಮಿಂಗ್ ಹ್ಯಾಮ್ನಲ್ಲಿ ನಡೆಯುತ್ತಿರುವ 22ನೇ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಬಿಂದ್ಯಾರಾಣಿ ದೇವಿ ವೇಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕದ ಬೇಟೆ ನಾಲ್ಕಕ್ಕೆ ಏರಿಕೆಯಾಗಿದೆ.
Congratulations to Bindyarani Devi for winning a Silver medal at CWG, Birmingham. This accomplishment is a manifestation of her tenacity and it has made every Indian very happy. I wish her the very best for her future endeavours. pic.twitter.com/4Z3cgVYZvv
— Narendra Modi (@narendramodi) July 31, 2022
ಭಾರತ 22ನೇ ಕಾಮನ್ವೆಲ್ತ್ ಗೇಮ್ಸ್ನಲ್ಲಿ ವೇಟ್ಲಿಫ್ಟಿಂಗ್ ವಿಭಾಗ ಒಂದರಲ್ಲೇ 4 ಪದಕ ಗೆದ್ದಿದೆ. ನಿನ್ನೆ ಮಹಿಳೆಯರ 44 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದರು. ಪುರುಷರ ವಿಭಾಗದಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. 55 ಕೆಜಿ ವಿಭಾಗದ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 248 ಕೆಜಿ ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದರು.
The exceptional @mirabai_chanu makes India proud once again! Every Indian is delighted that she’s won a Gold and set a new Commonwealth record at the Birmingham Games. Her success inspires several Indians, especially budding athletes. pic.twitter.com/e1vtmKnD65
— Narendra Modi (@narendramodi) July 30, 2022
ಪದಕ ಗೆದ್ದ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Exceptional effort by Sanket Sargar! His bagging the prestigious Silver is a great start for India at the Commonwealth Games. Congratulations to him and best wishes for all future endeavours. pic.twitter.com/Pvjjaj0IGm
— Narendra Modi (@narendramodi) July 30, 2022