Tuesday, May 17, 2022

ಮಂಡ್ಯದ ಒಂದೇ ಶಾಲೆಯ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

Must read

ಮಂಡ್ಯ: ಜಿಲ್ಲೆಯ ಮಾಕವಳ್ಳಿ ಸರ್ಕಾರಿ ಪ್ರೌಢ ಶಾಲೆಯ 16 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಂಡ್ಯ ಜಿಲ್ಲೆಯ ಕೆ‌.ಆರ್‌.ಪೇಟೆ ತಾಲೂಕಿನ ಮಾಕವಳ್ಳಿಯಲ್ಲಿ ನಿನ್ನೆ ಕೊರೊನಾ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.

ಈ ಪೈಕಿ 16 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೀನ್​ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

Latest article