Sunday, October 2, 2022

ಫೋಟೋ ವಿವಾದ: ಶಿವಮೊಗ್ಗದಲ್ಲಿ ಮತ್ತೋರ್ವ ಯುವಕನಿಗೆ ಚಾಕು ಇರಿತ

Must read

ಶಿವಮೊಗ್ಗ: ಶಿವಮೊಗ್ಗದಲ್ಲಿ ಫೋಟೋ ವಿವಾದ ಅತಿರೇಖಕಕ್ಕೇರಿದ್ದು, ಗಲಾಟೆಯಲ್ಲಿ ಮತ್ತೋರ್ವ ಯುವಕನಿಗೆ ಚಾಕು ಇರಿಯಲಾಗಿದೆ.

ಶಿವಮೊಗ್ಗದ ಅಶೋಕ‌ನಗರ ಬಡಾವಣೆಯಲ್ಲಿ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗುವಾಗ ಪ್ರವೀಣ್ ಕುಮಾರ್ (27) ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

ಸದ್ಯ ಗಾಯಾಳು ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆಲವೇ ಕ್ಷಣಗಳ ಹಿಂದಷ್ಟೇ ಗಾಂಧಿಬಜಾರ್ ಸಮೀಪದ ಉಪ್ಪಾರಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನು ಗಲಾಟೆ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದು, ಟಿಯರ್ ಗ್ಯಾಸ್ ಸಿಡಿಸಲು ಯತ್ನಿಸಿದ್ದಾರೆ. ಆದರೆ ಹಿಂದೂ ಕಾರ್ಯಕರ್ತರು ಟಿಯರ್ ಗ್ಯಾಸ್ ಸಿಡಿಸಲು ವಿರೋಧ ವ್ಯಕ್ತಪಡಿಸಿದ್ದಾರೆ.

Latest article