Sunday, October 2, 2022

ಟೆರರಿಸ್ಟ್​ಗಳನ್ನ ಹುಟ್ಟು ಹಾಕಿದ್ದೇ ಕಾಂಗ್ರೆಸ್​..!

Must read

ದೇಶಾದ್ಯಂತ ಇಂದು ವಿವಿಧ ರಾಜ್ಯಗಳಲ್ಲಿ ಪಿಎಫ್​ಐ ಹಾಗೂ ಎಸ್​ಡಿಪಿಐ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ PFI ಹಾಗು SDPI ಮೇಲೆ ಎನ್ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಲಾಗಿದ್ದು, ಏಕತೆ, ಸಮಗ್ರತೆ ಹಾಳು ಮಾಡುವ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ ಎನ್ನಲಾಗಿದೆ. ಈ ಮಾಹಿತಿಯ ಮೇರೆ ರೇಡ್​ ಮಾಡಲಾಗಿದ್ದು, ಅವರಲ್ಲಿ ಹಲವರನ್ನ ವಶಕ್ಕೆ ಪಡೆಯಲಾಗಿದೆ ಎಂದರು.
ಇನ್ನು ಇದೇ ವೇಳೆ ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನದ ಬಗ್ಗೆ ಕೂಡ ಮಾತನಾಡಿದ್ದು, ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ. ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ ತಯಾರು ಮಾಡಲಾಗಿತ್ತು. ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ. ಉಗ್ರಗಾಮಿಗಳನ್ನ ಹುಟ್ಟು ಹಾಕಿದ್ದೇ ಕಾಂಗ್ರೆಸ್​ ಎಂದು ವಿಪಕ್ಷ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಟೆರರಿಸ್ಟ್ಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್. ಸಂಘಟನೆ ಬ್ಯಾನ್ ಆದ್ರೆ ವ್ಯಕ್ತಿಗಳ ರಾಕ್ಷಸ ಮನೋಭಾವ ಬದಲಾಗೋದಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಆರೋಪಿಸಿದರು.

Latest article