Tuesday, October 26, 2021

ನಾಡಿನೆಲ್ಲೆಡೆ ಆಯುಧಪೂಜೆ ಸಂಭ್ರಮ: ಸಾಂಸ್ಕೃತಿಕ ನಗರಿಯಲ್ಲಿ ಪೂಜಾ ವಿಧಿ ವಿಧಾನಗಳು ಆರಂಭ

Must read

ಮೈಸೂರು: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ ರಾಜ ಪರಂಪರೆಯ ಆಯುಧಪೂಜೆ ಅದ್ಧೂರಿಯಿಂದ ನೆರವೇರುತ್ತಿದೆ.

ಇಂದು ಬೆಳಗ್ಗೆ 5.30ರಿಂದ ಅರಮನೆಯಲ್ಲಿ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿದ್ದು, ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆಯಾಗಿದೆ. ಕೋಡಿ‌ ಸೋಮೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅರಮನೆ ಕಲ್ಯಾಣಮಂಟಪಕ್ಕೆ ಪಟ್ಟದ ಕತ್ತಿ ಹಾಗೂ ಆಯುಧಗಳನ್ನು ರವಾನೆ ಮಾಡಲಾಗುತ್ತದೆ. ಬೆಳಗ್ಗೆ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ನಡೆಯಲಿದ್ದು, ಪೂರ್ವಿಕರು ಬಳಸುತ್ತಿದ್ದ ಕತ್ತಿ, ಗುರಾಣಿ ಈಟಿ ಸೇರಿ ಆನೆ, ಕುದುರೆ, ಹಸು, ಹಾಗೂ ಪಲ್ಲಕ್ಕಿ ಕಾರುಗಳಿಗೂ ಪೂಜೆ ನಡೆಯಲಿದೆ.

More articles

Latest article