Sunday, October 2, 2022

ಬೈಕ್​ಗೆ ಹಿಂದಿನಿಂದ ಲಾರಿ ಡಿಕ್ಕಿ: ತಲೆ ಮೇಲೆ ಚಕ್ರ ಹರಿದು ಮಹಿಳೆ ಸಾವು

Must read

ಶಿವಮೊಗ್ಗ: ಬೈಕ್​ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಬೈಪಾಸ್ ರಸ್ತೆ ಯಮಹಾ ಶೋ ರೂಮ್​​ ಬಳಿಯ ನಿವಾಸಿ ಸಂಜಿದಾ ಮೃತ ದುರ್ದೈವಿ.

ಮೃತ ಸಂಜಿದಾ ಪತಿಯ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದ್ದು, ಲಾರಿ ಚಕ್ರ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Latest article