Tuesday, November 29, 2022

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ

Must read

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಆದಷ್ಟು ಬೇಗ ಗುಣಮುಖರಾಗಲಿ ಎಂದು ಜೆಡಿಎಸ್​ ಕಾರ್ಯಕರ್ತರು ಮಂಡ್ಯದ ಪಂಚಲಿಂಗೇಶ್ವರ ದೇವಸ್ಥಾನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮಂಡ್ಯದ ಕೆರಗೋಡು ಗ್ರಾಮದಲ್ಲಿರುವ ಪ್ರಸಿದ್ಧ ದೇವಸ್ಥಾನ ಪಂಚಲಿಂಗೇಶ್ವರ ದೇವಾಲಯಕ್ಕೆ ಮಾಜಿ ಪ್ರಧಾನಿ ದೇವೇಗೌಡ್ರ ಹೆಸರಲ್ಲಿ ಅರ್ಚನೆ ಸಲ್ಲಿಸಿ, ವಿಶೇಷ ಪೂಜೆ ಮಾಡಿಸಿದ್ದಾರೆ. ದೇವೇಗೌಡ್ರು ಈ ದೇಶ ಕಂಡ ಅಪ್ರತಿಮರು, ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸಿದಂತವರು. ಈ ದೇಶಕ್ಕೆ ಅವರ ಕೊಡುಗೆ ಅಪಾರ, ದೇವರು ಅವರಿಗೆ ಆರೋಗ್ಯ ಕೊಟ್ಟು ಕಾಪಾಡಲಿ. ಬೇಗ ಗುಣಮುಖರಾಗಿ ರಾಜಕೀಯ ಕ್ಷೇತ್ರದಲ್ಲಿ ಮತಷ್ಟು ಅಭಿವೃದ್ಧಿ ಮಾಡಲಿ ಅಂತ ಬಿ.ಆರ್.ರಾಮಚಂದ್ರು ಹೇಳಿದ್ದಾರೆ.

 

 

 

 

 

 

 

 

 

Latest article