ತುಮಕೂರು: ಓಮಿನಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆಯ ಪಕ್ಕದಲ್ಲಿ ಹೊತ್ತಿ ಕಾರು ಹೊತ್ತಿ ಉರಿದಿದೆ.
ತುಮಕೂರಿನ ಡಿಸಿ ಕಚೇರಿ ಬಳಿ ಗ್ಯಾಸ್ ಲೀಕ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಕಾರು ಹೊತ್ತಿ ಉರಿದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನ ಮಾಲೀಕರು ಯಾರು ಎನ್ನುವುದು ಈವರೆಗೂ ಪತ್ತೆಯಾಗಿಲ್ಲ.