Tuesday, August 16, 2022

ಹಳೆ ದ್ವೇಷಕ್ಕೆ ಪೆಟ್ರೋಲ್​ ಸುರಿದು ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Must read

ಮಂಡ್ಯ: ಹಳೆ ದ್ವೇಷಕ್ಕೆ ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯ ತಾಲೂಕಿನ ಗೊರವಾಲೆ ಗ್ರಾಮದಲ್ಲಿ ನಡೆದಿದೆ.

ನಾಗಣ್ಣ ಎನ್ನುವವರ ಮಾಲೀಕತ್ವದ ಅಂಗಡಿಗೆ ನಿನ್ನೆ ತಡರಾತ್ರಿ ಕೆಲ ಕಿಡಿಗೇಡಿಗಳು ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಆವರಿಸಿದ್ದು, ಅಂಗಡಿಯೊಳಗಿದ್ದ ಸಿಲಿಂಡರ್​ ಸ್ಫೋಟಗೊಂಡಿದೆ.

ಬೆಂಕಿ ಹೊತ್ತಿ ಉರಿಯುವ ಭಯಾನಕ ದೃಶ್ಯ ಸೆರೆಯಾಗಿದೆ. ಹಳೆ ವೈಷಮ್ಯಕ್ಕೆ ಅಂಗಡಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest article