ರಾಮನಗರ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಜಿಲ್ಲೆಯ ಅನೇಕ ಭಾಗಗಳಲ್ಲಿ ಸುರಿದ ಭಾರೀ ಮಳೆಗೆ ರಾಮನಗರ ಬಳಿ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ಮೈಸೂರು, ಮಂಡ್ಯ, ರಾಮನಗರದ ಕಡೆ ಹೋಗುವವರು ಕನಕಪುರ ರಸ್ತೆ ಮೂಲಕ ತೆರಳುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಇನ್ನು ಜಲಾವೃತವಾದ ಪ್ರದೇಶಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ಸಾರ್ವಜನಿಕರಲ್ಲಿ ನನ್ನ ವಿನಂತಿ;
ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. 1/2 pic.twitter.com/csZxvrNPbv
— H D Kumaraswamy (@hd_kumaraswamy) August 29, 2022