ರಾಮನಗರ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ವರುಣಾರ್ಭಟಕ್ಕೆ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಹೆದ್ದಾರಿಗಳಲ್ಲಿ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ರಾಮನಗರ ರೈಲ್ವೆ ಸ್ಟೇಷನ್ ಬಳಿಯ ಕೆಳ ಸೇತುವೆ ಬಳಿ ಮಳೆ ನೀರು ತುಂಬಿಕೊಂಡಿದ್ದು, ಅದೇ ಮಾರ್ಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಸಂಪೂರ್ಣ ಮುಳುಗಡೆಯಾಗಿದೆ. ರಾಮನಗರದಿಂದ ಹುಣಸನಹಳ್ಳಿ ಕಡೆ ತೆರಳುತ್ತಿದ್ದ ಬಸ್ ಕೆಳ ಸೇತುವೆ ಕೆಳಗೆ ಸಿಲುಕಿಕೊಂಡಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.