Tuesday, November 29, 2022

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

Must read

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ನೌಕರರ ಒಕ್ಕೂಟ ಮಂಡ್ಯ ಡಿಸಿ ಕಚೇರಿ ಬಳಿ ಧರಣಿ ನಡೆಸಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ಧರಣಿ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೋರಹಾಕಿದ್ದಾರೆ. 7ನೇ ವೇತನ ಆಯೋಗ ಜಾರಿ, ಕೊವಿಡ್ ಸಮಯದ 18 ತಿಂಗಳ ತುಟ್ಟಿ ಭತ್ಯೆ, ಶೇ.25 ಮಧ್ಯಂತರ ಪರಿಹಾರ ವಿತರಣೆ ಹಾಗೂ NPS ರದ್ದು ಪಡಿಸಿ, ಖಾಲಿ ಇರುವ 2.80 ಲಕ್ಷ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ತಕ್ಷಣವೇ ರಾಜ್ಯ ಸರ್ಕಾರ ನೌಕರರ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದ್ದಾರೆ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಹೋರಾಟ ಮಾಡುವ ಭರವಸೆ ನೀಡಿದ್ರು.

Latest article