ಮಂಡ್ಯ: ಕಾಲೇಜು ಪ್ರಾಂಶುಪಾಲರ ಮೇಲೆ ಶಾಸಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಇಂದು ಸಹ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನ ಪ್ರಾಂಶುಪಾಲರ ಮೇಲೆ ಶಾಸಕ ಎಂ.ಶ್ರೀನಿವಾಸ್ ಕಪಾಳಕ್ಕೆ ಬಾರಿಸಿ ಹಲ್ಲೆ ನಡೆಸಿದ್ದರು.
ಈ ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದ್ದಾರೆ.
ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಶಾಸಕ ಎಂ.ಶ್ರೀನಿವಾಸ್ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.