ಯಾದಗಿರಿ: ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಗಾಂಜಾ ಸಂಗ್ರಹ ಮಾಡಿಟ್ಟಿದ್ದ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಬಕಾರಿ ನಿರೀಕ್ಷಕ ಕೇದಾರನಾಥ ಎಸ್.ಟಿ ನೇತೃತ್ವದಲ್ಲಿ ಹುಣಸಗಿ ಪಟ್ಟಣದ ನಂದಪ್ಪ ಎನ್ನುವಾತನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟ 82 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಅಧಿಕಾರಿಗಳು ದಾಳಿ ನಡೆಸುತ್ತಿದ್ದ ಕೇದಾರನಾಥ ಮನೆಯಿಂದ ಪರಾರಿಯಾಗಿದ್ದು, ಆರೋಪಿ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.