Tuesday, November 29, 2022

ಲಂಡನ್‌ನಲ್ಲಿರುವ ಕನ್ನಡ ಕೂಟ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಡಾ. ಮುರುಗೇಶ ಆರ್. ನಿರಾಣಿ

Must read

ಲಂಡನ್‌ನಲ್ಲಿರುವ ಕನ್ನಡ ಕೂಟ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ಅವರು, ‘ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಯೂರೋಪ್‌ ನಡುವಿನ ಉತ್ತಮ ಔದ್ಯಮಿಕ ಸಂಬಂಧಕ್ಕೆ ಕಾರಣರಾದ ಎಲ್ಲರನ್ನು ಅಭಿನಂಧಿಸಿದರು. ಜತೆಗೆ, ಜಾಗತಿಕ ಹೂಡಿಕೆದಾರರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು. ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ನೇತೃತ್ವದ ನಿಯೋಗ 7 ದಿನಗಳ ಯೂರೋಪ್‌ ಪ್ರವಾಸ ಕೈಗೊಂಡಿದೆ. ನಿಯೋಗವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಅವರನ್ನೊಳಗೊಂಡಿದೆ.

Latest article