ತುಮಕೂರು: ಮೂರು ದಿನಗಳ ಹಿಂದೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವೃದ್ಧನ ಮೃತದೇಹ ಇಂದು ಪತ್ತೆಯಾಗಿದೆ.
ಹನುಮಂತಪುರ ನಿವಾಸಿ ದ್ವಾರಪ್ಪ(60) ಮೃತ ದುರ್ದೈವಿ.
ದ್ವಾರಪ್ಪ ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಮಧುಗಿರಿ ತಾಲೂಕಿನ ನಾಗಲಾಪುರ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಎನ್ಡಿಆರ್ಎಫ್ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿದ್ದು, ಘಟನಾ ಸ್ಥಳದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.
ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹ ಕಂಡು ದ್ವಾರಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.