Wednesday, June 29, 2022

ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ: ಸಿದ್ದರಾಮಯ್ಯ ಆರೋಪ

Must read

ಮೈಸೂರು: ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ದೀಪ ಬೆಳಗುವ ಮೂಲಕ ಕಾಂಗ್ರೆಸ್ ನವಸಂಕಲ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ಕಾಯ್ದೆ ತಿದ್ದುಪಡಿ ಆಗಬೇಕು. ಒಂದು ಪಕ್ಷದಿಂದ ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟು ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದರು.

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ ವಿಚಾರವಾಗಿ ಮಾತನಾಡಿ, ಇದು ಸಾಮಾಜಿಕ ನ್ಯಾಯ ಅಲ್ಲ, ವಿಶೇಷವೂ ಅಲ್ಲ. ಆ ರೀತಿ ಇದ್ದರೆ ಆರ್​ಎಸ್​ಎಸ್ ಮುಖ್ಯ ಸರಸಂಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ಭಾಗವತ್ ಸ್ಥಾನಕ್ಕೆ ಇಂತಹ ಮಹಿಳೆಯನ್ನು ತರಲಿ ಎಂದರು. ದ್ರೌಪದಿ ಮುರ್ಮಾ ಆಯ್ಕೆ ಕುರಿತು ಪ್ರತಿಕ್ರಿಯಿಸಿ, ಆಕೆ ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲರು ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಅಂತಹ ಕೆಲಸ ಮಾಡಲು ಇವರು ಬಿಡಲ್ಲ. ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗಿತ್ತಾ? ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು . ಅವರು ಏನು ಮಾಡಿದರು? ಇದು ಅವರಂತೆ ನಾಮಕವಾಸ್ತೆಗೆ ಮಾಡುತ್ತಿದ್ದಾರೆ ಎಂದರು.

 

 

Latest article