Sunday, October 2, 2022

ಶಿವಮೊಗ್ಗದಲ್ಲಿ ಅತಿರೇಖಕಕ್ಕೇರಿದ ಫೋಟೋ ವಿವಾದ : ಯುವಕನಿಗೆ ಚಾಕು ಇರಿತ

Must read

ಶಿವಮೊಗ್ಗ: ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಆರಂಭವಾದ ಜಟಾಪಟಿ ಅತಿರೇಖಕಕ್ಕೇರಿದ್ದು, ಗಲಾಟೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ಯುವಕರ ನಡುವೆ ಫೋಟೋ ವಿಚಾರಕ್ಕೆ ಜಟಾಪಟಿ ನಡೆದಿದ್ದು, ಗಲಾಟೆಯಲ್ಲಿ ಗಾಂಧಿಬಜಾರ್ ಸಮೀಪದ ಉಪ್ಪಾರಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

ಸದ್ಯ ಆರೋಪಿಗಳು ಪರಾರಿಯಾಗಿದ್ದು, ಗಾಯಾಳು ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರುವ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಕೆಲ ಯುವಕರು ಮುಂದಾಗಿದ್ದರು. ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟೋ ತೆರವು ಮಾಡಿದ್ದರು. ಜೊತೆಗೆ ಟಿಪ್ಪು ಫೋಟೊ ಇಡಲು ನಿರಾಕರಿಸಿದ್ದರು. ಇದೇ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಸಾವರ್ಕರ್ ಫೋಟೋ ತೆರವು ಮಾಡಿರುವುದಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮತ್ತೊಂದು ಕೋಮಿನ ಯುವಕರು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ್ದು, ಪೊಲೀಸರನ್ನೂ ಲೆಕ್ಕಿಸದೇ ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಪ್ರಹರ ಕೂಡ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

 

Latest article