ಶಿವಮೊಗ್ಗ: ಚಾಲಕನಿಗೆ ಪಿಡ್ಸ್ ಬಂದು ಟಿಟಿ ವಾಹನವೊಂದು ಪಲ್ಟಿಯಾಗಿರುವ ಘಟನೆ ಸಾಗರ ತಾಲೂಕಿನ ಸಿಗಂದೂರು ಸಮೀಪದ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ.
ಟಿಟಿ ವಾಹನ ಚಲಾಯಿಸುವಾಗ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ರಸ್ತೆ ಪಕ್ಕದ ದಿಬ್ಬಕ್ಕೆ ಗುದ್ದಿ, ಪಲ್ಟಿಯಾಗುತ್ತಲೇ ತಗ್ಗು ಪ್ರದೇಶದ ಮನೆಯೊಂದರ ಬಳಿ ಬಂದು ಬಿದ್ದಿದೆ.
ಪರಿಣಾಮ ವಾಹನದಲ್ಲಿದ್ದ 5ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರಿನ ಬಿಡದಿ ಮೂಲದ ಒಂದೇ ಕುಟುಂಬಸ್ಥರು ಸಿಗಂದೂರು ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಶಿವಮೊಗ್ಗದ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.