ರಾಮನಗರ: ಧಾರಾಕಾರ ಮಳೆಗೆ ರಾಮನಗರ ಜಿಲ್ಲೆ ತತ್ತರಿಸಿದ್ದು, ನಗರದ ಖಾಸಗಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡಿದೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಹಾಗೂ ಹೊರರೋಗಿಗಳ ವಿಭಾಗಕ್ಕೆ ಮಳೆ ನೀರು ನುಗ್ಗಿದ್ದು, ವೈದ್ಯಕೀಯ ಉಪಕರಣಗಳಿಗೆ ಹಾನಿಯಾಗಿದೆ.
ಸದ್ಯ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದ್ದು, ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಇನ್ನು ಜಿಲ್ಲೆಯ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಾಮನಗರದ ಜನ ಮಳೆಯ ಆರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ.