ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಕರ್ನಾಟಕದ 30ನೇ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಲಾಯಿತು. ಈ ವಿಚಾರ ತಿಳಿಯುತ್ತಿದ್ದಂತೆ ರಾಜ್ಯದ ಮೂಲೆ ಮೂಲೆಯಲ್ಲಿರುವ ಬೊಮ್ಮಾಯಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದರು.
ಇನ್ನು ಕುಟುಂಬಸ್ಥರು ಬೊಮ್ಮಾಯಿ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ..ನೀನೇ ರಾಜಕುಮಾರ.. ಎಂದು ಹಾಡಿ ಖುಷಿ ಹಂಚಿಕೊಂಡಿದ್ದಾರೆ. ಈ ವೇಳೆ ಬೊಮ್ಮಾಯಿ ಅವರ ಪತ್ನಿ ಚೆನ್ನಮ್ಮ, ಪುತ್ರ, ಪುತ್ರಿ ಸೇರಿದಂತೆ ಅವರ ಆಪ್ತರು ಉಪಸ್ಥಿತರಿದ್ದರು.