Monday, November 29, 2021

ಜೆಡಿಎಸ್​ಗೆ ಮತ್ತೊಂದು ಶಾಕ್: ಮಾಜಿ ಸಚಿವ ಚೆನ್ನಿಗಪ್ಪ ಪುತ್ರರು ಕಾಂಗ್ರೆಸ್​ ಸೇರ್ಪಡೆ..!

Must read

ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್​ಗೆ ಮತ್ತೊಂದು ಶಾಕ್ ಉಂಟಾಗಿದೆ. ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಎಂಎಲ್​ಸಿ ಕಾಂತರಾಜು ಬಳಿಕ ಈಗ ಮಾಜಿ ಸಚಿವ ಚೆನ್ನಿಗಪ್ಪ ಪುತ್ರರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಕೊರಟಗೆರೆಯ ಬೈಚೇನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ಮುಖಂಡರಾದ ಅರುಣ್ ಕುಮಾರ್ ಮತ್ತು ವೇಣುಗೋಪಾಲ್ ಡಿಸೆಂಬರ್​ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಜೊತೆಗೆ ಕೊರಟಗೆರೆಯಲ್ಲಿ ಪರಮೇಶ್ವರ್ ಗೆಲುವಿಗೆ ಶ್ರಮಿಸುವುದಾಗಿ ಪ್ರಮಾಣ ಮಾಡಿದ್ದಾರೆ.

ಅರುಣ್ ಕುಮಾರ್ ಮತ್ತು ವೇಣುಗೋಪಾಲ್​ ತುಮಕೂರು ಗ್ರಾಮಾಂತರ‌ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ ಅವರ ಸಹೋದರರಾಗಿದ್ದಾರೆ.

Latest article