Sunday, October 2, 2022

ತುಮಕೂರು: ವೀರ ಸಾವರ್ಕರ್​​ ಫೋಟೋ ಹರಿದು ಹಾಕಿದ ಕಿಡಿಗೇಡಿಗಳು

Must read

ತುಮಕೂರು: ಕಿಡಿಗೇಡಿಗಳು ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ತುಮಕೂರು ನಗರದ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ತುಮಕೂರು ನಗರದ ವಿವಿಧ ಭಾಗಗಳಲ್ಲಿ 80 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ ಹಾಕಿಸಿದ್ದರು.

ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ನಿನ್ನೆ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ತುಮಕೂರು ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest article