Monday, November 29, 2021

ಜಲಾಶಯದ ಗೇಟ್​ ವಾಲ್​ ತೆರೆಯುವ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರು..!

Must read

ತುಮಕೂರು: ಮಾರ್ಕೋನಹಳ್ಳಿ ಜಲಾಶಯದ ಗೇಟ್​ ವಾಲ್​ ತೆರೆಯುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಮಾರ್ಕೋನಹಳ್ಳಿ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ಕೆಲ ಕಾರ್ಮಿಕರು ಇಂದು ಗೇಟ್ ವಾಲ್ ತೆರೆಯಲು ಮುಂದಾಗಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಮೂರು ಕಾರ್ಮಿಕರು ಕೊಚ್ಚಿ ಹೋಗಿದ್ದು, ಸ್ಥಳದಲ್ಲೇ ಇದ್ದ ಹಗ್ಗ ಹಿಡಿದುಕೊಂಡು ಅಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗಿದ್ದು, ಕೆರೆ ಹಳ್ಳಗಳು ಬಹುತೇಕ ಭರ್ತಿಯಾಗಿದೆ. ಹೀಗಾಗಿ ಜಲಾಶದಲ್ಲಿಯೂ ನೀರಿನ ಪ್ರಮಾಣ ಹೆಚ್ಚಾಗಿದೆ.

Latest article