ಉಡುಪಿ: ಪಿಠೋಪಕರಣದ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಣಿಪಾಲದ ಲಕ್ಷ್ಮೀನಗರದಲ್ಲಿ ನಡೆದಿದೆ.
ಲಕ್ಷ್ಮೀನಗರದ ಬಳಿ ಇರುವ ಸುಧಾ ಫರ್ನಿಚರ್ಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಅಂಗಡಿ ಹೊತ್ತಿ ಉರಿದಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ ಪ್ರಮಾಣದ ಪಿಠೋಪಕರಣಗಳು ಮತ್ತು ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮಾಲೀಕರಿಗೆ 40 ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವ ಸಾಧ್ಯತೆಯಿದೆ.