ಉಡುಪಿ: ಮಣಿಪಾಲ ವೆಸ್ಟೇಕ್ ಎಂಟರ್ಪ್ರೈಸಸ್ನಲ್ಲಿ ನಿನ್ನೆ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ವೆಸ್ಟೇಕ್ ಎಂಟರ್ಪ್ರೈಸಸ್ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಬೆಂಕಿ ವ್ಯಾಪಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಮುಂಜಾನೆವರೆಗೂ ಬೆಂಕಿ ಆರಿಸುವ ಕಾರ್ಯಾಚರಣೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಫ್ಯಾಕ್ಟರಿ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ. ಅದೃಷ್ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.