Tuesday, August 16, 2022

ಕುಂದಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ: ಅಂತರ್​ ರಾಜ್ಯ ಕಳ್ಳರು ಅಂದರ್​

Must read

ಉಡುಪಿ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಅಂತರ್‌ ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಪುಣೆಯ ಧನರಾಜ್‌ ವಿಜಯ ಪರ್‌ ಮಾರ್‌ ಹಾಗೂ ಅಜಯ್‌ ಸಿಂಗ್‌ ಕಿಶೋರ್‌ ಸಾಲುಂಕ್ ಬಂಧಿತ ಆರೋಪಿಗಳು.

ಉಡುಪಿ ಜಿಲ್ಲೆಯ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಬ್ಯಾಂಕ್ವೆಟ್‌ ಹಾಲ್​ನಲ್ಲಿ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯುತ್ತಿದ್ದು, ಗ್ರಾಹಕರ ಸೋಗಿನಲ್ಲಿ ಬಂದ ಆರೋಪಿಗಳು ಆಭರಣ ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದ ತನಿಖೆ ಚುರುಕುಗೊಳಿಸಿದ ಕುಂದಾಪುರ ಪೊಲೀಸರು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇಬ್ಬರು ಅಂತರ್‌ ರಾಜ್ಯ ಕಳ್ಳರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 1 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Latest article