Monday, November 29, 2021

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ಓರ್ವ ಹೆಬ್ಬೆಟ್ಟು ಗಿರಾಕಿ ತಾನು ಕನಸು ಕಾಣುತ್ತಿದ್ದಾನೆ; ಸಿದ್ದು ವಿರುದ್ಧ ಬಿಜೆಪಿ ಟ್ವೀಟ್

Must read

ಬೆಂಗಳೂರು: ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ ಎಂದು ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯನವರೇ, ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ? ಬುರುಡೆರಾಮಯ್ಯ ಎಂಬ ಹ್ಯಾಶ್ ಟ್ಯಾಗ್ ಹಾಕಿ ಪ್ರಶ್ನಿಸಿದೆ.

ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ, ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?. ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ, ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೆ ಮಾತನಾಡುತ್ತೀರಾ ನೀವು? ಎಂದು ಗುಡುಗಿದೆ.

Also read:  ವಿರಾಟ್ ಈಗ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ

 

Latest article