Tuesday, May 17, 2022

ಹುಟ್ಟುಹಬ್ಬದ ದಿನವೇ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಿತಿ ಚಿಂತಾಜನಕ

Must read

ಮಂಡ್ಯ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.

ಮಳವಳ್ಳಿಯ ಶಾಂತಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ವ್ಯಾಸಂಗ ಮಾಡುತ್ತಿರುವ ಶರತ್ , ಶಶಾಂಕ್, ಸುದರ್ಶನ್ ಎನ್ನುವ ವಿದ್ಯಾರ್ಥಿಗಳು  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಹುಟ್ಟುಹಬ್ಬದ ದಿನವೇ‌ ಶರತ್​ಗೆ ಕಾರು ಅಪಘಾತವಾಗಿದ್ದು, ಸದ್ಯ ಆತನ ಸ್ಥಿತಿ ಗಂಭೀರವಾಗಿದೆ. ಇನ್ನು ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮಳವಳ್ಳಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Latest article