Thursday, January 20, 2022

ಪಂಜಾಬ್ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಫೈಟ್..!

Must read

ಕಾಂಗ್ರೆಸ್ ಹೈಕಮಾಂಡ್ ಎಷ್ಟೇ ಪ್ರಯತ್ನಪಟ್ಟರೂ ಪಂಜಾಬ್​ನಲ್ಲಿ ಆಂತರಿಕ ಗೊಂದಲ ಕಡಿಮೆಯಾಗುವ ಯಾವುದೇ ಲಕ್ಷಣ ಘೋಚರಿಸುತ್ತಿಲ್ಲ. ಪಂಜಾಬ್​ನಲ್ಲಿ ಮತ್ತೆ ಅಧಿಕಾರ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್​ಗೆ ಇನ್ನಷ್ಟು ಸಂಕಷ್ಟಗಳು ಎದುರಾಗುವ ಸಾಧ್ಯತೆ ಇದೆ.

ಪಂಜಾಬ್​ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕಾಂಗ್ರೆಸ್ ಇನ್ನೂ ಯೋಚನೆ ಮಾಡಿಲ್ಲ. ಆದರೆ, ಪಂಜಾಬ್ ಘಟಕದ ಇಬ್ಬರು ಪ್ರಮುಖ ಮುಖಗಳಾದ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಈ ಬಗ್ಗೆ ಈಗಲೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಂಜಾಬ್​ನ ಹೊಸ ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುವುದಿಲ್ಲ. ಬದಲಿಗೆ ಪಂಜಾಬ್​ನ ಜನರು ನಿರ್ಧರಿಸುತ್ತಾರೆ ಎಂದು ನವಜೋತ್ ಸಿಂಗ್ ಸಿಧು ಮಂಗಳವಾರ ಹೇಳಿದ್ದರು.

ಏತನ್ಮಧ್ಯೆ, ಚನ್ನಿ ಸಿಎಂ ಅಭ್ಯರ್ಥಿಯ ಬಗ್ಗೆ ದೊಡ್ಡ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಚುನಾವಣೆಗೆ ಮೊದಲು ತಮ್ಮ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸಬೇಕೆ ಎಂದು ಕೇಳಿದಾಗ, ಕಾಂಗ್ರೆಸ್ ಚುನಾವಣೆಗೆ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಚನ್ನಿ ಸ್ಥಳೀಯ ಚಾನೆಲ್​ಗೆ ಮಾತನಾಡುವ ಸಂದರ್ಭದಲ್ಲಿ ಹೇಳಿದ್ದಾರೆ. “ಪಕ್ಷವು ಸಿಎಂ ಅಭ್ಯರ್ಥಿಯನ್ನು ಘೋಷಿಸದಾಗಲೆಲ್ಲಾ ಅದು ಸೋತಿದೆ” ಎಂದು ಅವರು ಹೇಳಿದರು.

 

 

Latest article