Wednesday, June 29, 2022

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಶುಭಕೋರಿದ ಪ್ರಧಾನಿ ಮೋದಿ, ಹೆಚ್​ಡಿಕೆ

Must read

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮೇ 18ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ಹೆಚ್​ಡಿಡಿ, 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪುತ್ರ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಟ್ವೀಟ್​ ಮಾಡಿ, ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು. ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ.

ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Latest article