ಮೈಸೂರು: ಭಾರೀ ಮಳೆಗೆ ಮನೆ ಕುಸಿದು ಬಿದ್ದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ.
ಇಂದು ಮುಂಜಾನೆ 5:30ರ ಸುಮಾರಿಗೆ ಮನೆ ಕುಸಿದಿದ್ದು, ಮಹದೇವರಾವ್, ನಾಗರತ್ನ, ಅಕ್ಷಯ್, ಪೃಥ್ವಿ ಹಾಗೂ ವೃದ್ದೆ ನೀಲಮ್ಮ ಭಾಯ್ ಎನ್ನುವವರು ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಐವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.