Tuesday, October 26, 2021

ಬರೋಬ್ಬರಿ 15 ಕೆಜಿ ತೂಕ ಇಳಿಸಿಕೊಂಡ ನಟಿ ಖುಷ್ಬೂ ಸುಂದರ್

Must read

ಜನಪ್ರಿಯ ನಟಿ ಖುಷ್ಬೂ ಸುಂದರ್ ಈ ನಡುವೆ ಫಿಟ್​ನೆಸ್​​ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಇತ್ತೀಚೆಗೆ ಅವರು ಕೆಲ ಫೋಟೋಗಳನ್ನು ಹಂಚಿಕೊಂಡಿದ್ದರು. ಅದರಲ್ಲಿ ಸಾಕಷ್ಟು ಬದಲಾವಣೆಗಳಿದ್ದವು. ಈಗ ಅವರು ಮತ್ತೊಂದು ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಅಪ್ಲೋಡ್ ಮಾಡಿದ್ದಾರೆ.

 

View this post on Instagram

 

A post shared by Kushboo Sundar (@khushsundar)

ಈ ಫೋಟೋದಲ್ಲಿ ತಾವು 15 ಕೆಜಿ ತೂಕ ಇಳಿಸಿಕೊಂಡಿರುವುದಾಗಿ ಖುಷ್ಬೂ ತಿಳಿಸಿದ್ದಾರೆ. ಖುಷ್ಬೂ ಕನ್ನಡದ ರಣಧೀರ, ಅಂಜದ ಗಂಡು, ಯುಗಪುರುಷ, ಶಾಂತಿ ಕ್ರಾಂತಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೀಗ 50 ವರ್ಷ. ಈ ವಯಸ್ಸಿನಲ್ಲೂ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದೀಗ ಮೊದಲಿನ ಹಾಗೂ ಈಗಿನ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

 

More articles

Latest article