ಬೆಳಗಾವಿ: ಯುವಕನ ಮೇಲೆ ಯುವಕನೇ ಅತ್ಯಾಚಾರ ವೆಸಗಿರುವ ವಿಲಕ್ಷಣ ಘಟನೆ ಜಿಲ್ಲೆಯ ಅಥಣಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜು ಬಂಧಿತ ಆರೋಪಿ.
ಆರೋಪಿ ರಾಜು ಬಸ್ಗಾಗಿ ಕಾಯುತ್ತಿದ್ದ ಯುವಕನನ್ನು ಡ್ರಾಪ್ ಕೊಡುವ ನೆಪದಲ್ಲಿ ಬೈಕ್ನಲ್ಲಿ ಕರೆದುಕೊಂಡು ಹೋಗಿ, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸೆಗಿದ್ದಾನೆ ಎನ್ನಲಾಗಿದೆ. ಅಲ್ಲದೇ ಅತ್ಯಾಚಾರ ಮಾಡಿರುವುದನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.