Thursday, January 27, 2022

ಗೋವಾದಲ್ಲಿ ಪಕ್ಷಾಂತರ ಪರ್ವ ಆರಂಭ: ಬಿಜೆಪಿ ಸಚಿವ ಮೈಕೆಲ್ ಲೋಬೊ ರಾಜೀನಾಮೆ..!

Must read

ಪಂಚರಾಜ್ಯಗಳ ಚುನಾವಣಾ ಹಿನ್ನಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಈಗ ಗೋವಾ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಮೈಕೆಲ್ ಲೋಬೊ ಅವರು ತಮ್ಮ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅವರು ಪ್ರಮೋದ್​ ಸಾವಂತ್ ನೇತೃತ್ವದ ಸಚಿವ ಸ್ಥಾನಕ್ಕೆ ಮತ್ತು ವಿಧಾನಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಸಮಯದಲ್ಲಿ ಅವರು ಬಿಜೆಪಿಯನ್ನು ತೊರೆದಿದ್ದಾರೆ.

ಇಲ್ಲಿಯವರೆಗೆ ಕೆಲಂಗುಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಲೋಬೊ ಅವರು, ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಕಚೇರಿ ಹಾಗೂ ಗೋವಾ ವಿಧಾನಸಭೆಯ ಸ್ಪೀಕರ್ ಅವರಿಗೆ ಸಲ್ಲಿಸಿದ್ದಾರೆ. ನಾನು ಎರಡೂ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾನು ನೋಡುತ್ತೇನೆ ಎಂದರು.

ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದಾಗ, ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆಯಲ್ಲಿದ್ದೇವೆ. ಕರಾವಳಿ ರಾಜ್ಯದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಜನರಿಗೆ ಅಸಮಾಧಾನವಿದೆ. “ಬಿಜೆಪಿ ಈಗ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ನನಗೆ ಹೇಳಿದರು. ತಳಮಟ್ಟದ ಕಾರ್ಯಕರ್ತರು ಪಕ್ಷದಿಂದ ನಿರ್ಲಕ್ಷಿಸಲ್ಪಟ್ಟಿದ್ದಾರೆ ಎಂಬ ಭಾವನೆ ಇದೆ ಎಂದು ಅವರು ಹೇಳಿದರು.

Latest article