Tuesday, October 26, 2021

ಕುಮಾರಸ್ವಾಮಿ ಕಣ್ಮುಚ್ಚಿ ಮಲಗಿ ಎಲ್ಲವನ್ನೂ ನೆನಪಿಸಿಕೊಳ್ಳಲಿ-ಎಸ್​.ಟಿ ಸೋಮಶೇಖರ್​

Must read

ಮೈಸೂರು: ಮೈತ್ರಿ ಸರ್ಕಾರ ಏಕೆ ಪತನವಾಯ್ತು ಎಂಬುದು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಕುಮಾರಸ್ವಾಮಿ ರಾತ್ರಿ 10 ಗಂಟೆ ನಂತರ ಕಣ್ಮುಚ್ಚಿ ಮಲಗಿ ಎಲ್ಲವನ್ನೂ ನೆನಪಿಸಿಕೊಳ್ಳಲಿ. ಆಗ ಅವರಿಗೆ ಎಲ್ಲಾ ಸತ್ಯವೂ ಅರ್ಥವಾಗುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಮಾವುತ ಕಾವಾಡಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಎಂದಿಗೂ ನಮ್ಮನ್ನು ಪಕ್ಷದಿಂದ ಹೊರ ಹೋಗಿ ಎಂದು ಹೇಳಿಲ್ಲ. ಆದರೆ ಸರ್ಕಾರ ಏಕೆ ಬಿತ್ತು ಎಂಬುದು ಕುಮಾರಸ್ವಾಮಿಗೆ ಗೊತ್ತಿದೆ. ಎರಡು ವರ್ಷದ ನಂತರ ಮತ್ತೆ ಏಕೆ ಈ ವಿಚಾರ ಚರ್ಚೆ ಮಾಡುತ್ತಿದ್ದೀರಿ. ನಮಗೂ ಎರಡು ವರ್ಷದಿಂದ ಹೇಳಿ ಹೇಳಿ ಸಾಕಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದು ನಿಶ್ಚಿತವಾಗಿ ಒಂದು ಷಡ್ಯಂತ್ರ. ಮೊದಲಿಂದಲೂ ನಾನು ಹೇಳುತ್ತಿದ್ದೇನೆ. ಡಿ.ಕೆ ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ ಎಂದು ಹೇಳಿದರು.

More articles

Latest article