ವಿಜಯನಗರ: ಅಕಾಲಿಕ ಮಳೆಯಿಂದಾಗಿ ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ಸಿಗದ ಹಿನ್ನಲೆಯಲ್ಲಿ ರೈತರು ಹೊಲದಲ್ಲಿ ಬೆಳೆದು ನಿಂತ ಮೆಣಸಿನಕಾಯಿ ಬೆಳೆ ನಾಶಪಡಿಸುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮ ಸೋವೇನಹಳ್ಳಿ ಗ್ರಾಮದ ರೈತ ಕೆರೆಹಳ್ಳಿ ಗಣೇಶ ಎಂಬುವವರು ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಮಾಡಿದ್ದಾರೆ.
ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಬೆಳೆಗೆ ಬೆಂಬಲ ಸಿಗದ ಹಿನ್ನೆಲೆ 3 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಮೆಣಸಿನಕಾಯಿ ಗಿಡಗಳನ್ನು ಹಾನಿ ಮಾಡಿದ್ದಾರೆ.