ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕರೊಬ್ಬರ ಬೆಂಬಲಿಗರು ಕಿರುಕುಳ ನೀಡುತ್ತಿರುವುದಾಗಿ ವಿಡಿಯೋ ಮಾಡಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕಾಂಗ್ರೆಸ್ ಮುಖಂಡರಾದ ಬಚ್ಚನಳ್ಳಿ ಆನಂದ್, ಅಕ್ಕಿ ತೊಟ್ಟೇಶ್ ಹಾಗೂ ಸಬ್ಇನ್ಸ್ಪೆಕ್ಟರ್ ಒಬ್ಬರ ಹೆಸರು ಉಲ್ಲೇಖಿಸಿ ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ನನ್ನ ಸಾವಿಗೆ ಶಾಸಕ ಭೀಮಾ ನಾಯಕ ಅವರ ಬೆಂಬಲಿಗರು ಹಾಗೂ ಸಬ್ಇನ್ಸ್ಪೆಕ್ಟರ್ ಕಾರಣ ಎಂದು ಹೇಳಿದ್ದಾನೆ.