Monday, November 29, 2021

ರಾಜಕೀಯದವರು ಚುನಾವಣೆ ಬಂದಾಗ ಹಿಂದೂಗಳನ್ನು ಉಪಯೋಗಿಸಿಕೊಳ್ತಾರೆ: ಪ್ರಮೋದ್​ ಮುತಾಲಿಕ್

Must read

ವಿಜಯಪುರ: ರಾಜಕೀಯ ವ್ಯಕ್ತಿಗಳು ಗೂಂಡಾಗಳು. ಚುನಾವಣೆ ಬಂದಾಗ ರಾಜಕೀಯದವರು ಹಿಂದೂಗಳನ್ನು ಉಪಯೋಗ ಮಾಡಿಕೊಳ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಹೀಗಾಗಿ, ರಾಜಕಾರಣಿಗಳು ನಿಜವಾದ ಗೂಂಡಾಗಳು ಎಂದರು.

ಎಸಿಬಿ ದಾಳಿ ಬಗ್ಗೆ ಮಾತನಾಡಿ, ಭ್ರಷ್ಟ ಅಧಿಕಾರಿಗಳನ್ನು ಗಲ್ಲಿಗೆ ಏರಿಸಬೇಕು. ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕು. ಇವರ ಹಿಂದೆ ದೊಡ್ಡ-ದೊಡ್ಡ ರಾಜಕಾರಣಿಗಳಿದ್ದಾರೆ. ಅವರನ್ನೂ ಹೊರಗೆ ಹಾಕಬೇಕು. ಹೊರಗೆ ಇದ್ದೋರು ಬಂದೂಕು, ಚಾಕು ಚೂರಿ ಹಿಡಿದುಕೊಂಡು ಲೂಟಿ ಮಾಡ್ತಾರೆ. ರಾಜಕೀಯದಲ್ಲಿ ಇದ್ದವರು ಅಧಿಕಾರಿಗಳನ್ನು ಬಳಸಿಕೊಂಡು ಲೂಟಿ ಮಾಡ್ತಾರೆ. ಎಲ್ಲ ಪಕ್ಷದ ಬಹುತೇಕ ರಾಜಕಾರಣಿಗಳು ಭ್ರಷ್ಟರು, ಗೂಂಡಾಗಳಾಗಿದ್ದಾರೆ ಎಂದರು.

Latest article