Monday, January 30, 2023

‘ಬಿಜೆಪಿ ನಾಯಕರು ಉಮೇಶ್​ ಕತ್ತಿ ನಿಧನಕ್ಕೆ ಶೋಕಾಚರಣೆ ಅಂತಾರೆ..ಡಾನ್ಸ್​​ ಮಾಡ್ತಾರೆ‘

Must read

ಹುಬ್ಬಳ್ಳಿ: ಬಿಜೆಪಿಯವರು ಲಂಚ ಪಡೆದ ಹಣದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಬಿಜೆಪಿ ನಾಯಕರು ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡುವುದು ಬಿಟ್ಟು, ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ರಾಜಕಾರಣಿ. ಅವರ ನಿಧನದ ಹಿನ್ನೆಲೆಯಲ್ಲಿ ಒಂದು ಕಡೆ ಶೋಕಾಚರಣೆ ಮಾಡುತ್ತೇವೆ ಅಂತಾರೆ ಇನ್ನೊಂದು ಕಡೆ ಡ್ಯಾನ್ಸ್ ಮಾಡುತ್ತಾರೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ದುಡ್ಡು ಹೊಡೆಯುವುದರಲ್ಲಿ ಮಾತ್ರ ಅವರಿಗೆ ಕಾಳಜಿ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Latest article