ಮೈಸೂರು: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಏನು ಮಾಡಿದೆ.? ಬಿಜೆಪಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ. ಮೋದಿ ಸುಮ್ಮನೇ ಸುಳ್ಳು ಹೇಳಿ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರವಾಗಿ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಏನು ಮಾಡುವುದಿಲ್ಲ ಎನ್ನುವುದು ರಾಜ್ಯ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ. ರಾಜ್ಯಕ್ಕೆ ಮೋದಿ ಆಗಮನದಿಂದ 25 ಕೋಟಿಗಿಂತ ಹೆಚ್ಚು ಖರ್ಚು ಮಾಡಲಾಗಿದೆ. ರಸ್ತೆ ಆಗಿದಷ್ಟೇ ಜನರಿಗೆ ಆದ ಲಾಭ ಎಂದಿದ್ದಾರೆ.
ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಬೇರೆ ಪಕ್ಷದ ಶಾಸಕನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಮೈಸೂರಿನಲ್ಲಿದ್ದಾರೆ ಅವರನ್ನೇ ಹೋಗಿ ಕೇಳಬೇಕು ಎಂದು ಗರಂ ಆಗಿದ್ದಾರೆ. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಪ್ರಕರಣ ಮತ್ತೆ ಸಿಬಿಐಗೆ ನೀಡುವ ವಿಚಾರದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.