ಯಾದಗಿರಿ: ಜನಾರ್ಶೀವಾದ ಕಾರ್ಯಕ್ರಮಕ್ಕೆ ಆಗಮಿಸಿದ ಭಗವಂತ ಖೂಬಾಗೆ ನಾಡಬಂದೂಕು ಸಿಡಿಸಿ ಸ್ವಾಗತ ಕೋರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಮೊನಪ್ಪ, ಶರಣಪ್ಪ, ನಿಂಗಪ್ಪ ಹಾಗೂ ದೇವಿಂದ್ರಪ್ಪ ಬಂಧಿತರು.
ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬೆಂಬಲಿಗರು ನಾಡಬಂದೂಕು ಸಿಡಿಸಿ ಸ್ವಾಗತ ಕೋರಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಎಸ್ಪಿ ವೇದಮೂರ್ತಿ ಮಾರ್ಗದರ್ಶನದಲ್ಲಿ ಗ್ರಾಮೀಣ ಠಾಣೆ ಪಿಎಸ್ಐ ಸುರೇಶ್ ಕುಮಾರ್ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.